New Ration Card – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ

New Ration Card 2025 – ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ 

ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ನೀವು ಬಯಸುತ್ತಿದ್ದಿಯ ಹಾಗಾದ್ರೆ ಕೇಂದ್ರ ಸರ್ಕಾರ ಇದೀಗ ನಿಮಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ಗೆಳೆಯರೇ ಸ್ಪೆಷಲ್ NRC ರೇಷನ್ ಕಾರ್ಡ್ ಪಡೆಯಲು ಇದೀಗ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ (New Ration Card).?

ಹೌದು ಗೆಳೆಯರೇ, ಇದೀಗ ರಾಜ್ಯ ಹಾಗೂ ಕೇಂದ್ರ ಸರಕಾರ ಜೊತೆಗೂಡಿ (New Ration card application) ಕರ್ನಾಟಕದ ಜನತೆಗೆ ಇದೀಗ ಸಿಹಿ ಸುದ್ದಿ ನೀಡಿದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಮೂಲಕ ನೀವು ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು, ಆದರೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ಇ-ಶ್ರಮ್ ಕಾರ್ಡ್ ಹೊಂದಿರಬೇಕು ಅಂತವರಿಗೆ ಮಾತ್ರ ಇದೀಗ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

New Ration Card
New Ration Card
WhatsApp Group Join Now
Telegram Group Join Now       

 

ಹೌದು ಗೆಳೆಯರೆ ಇದೀಗ ಹೊಸ ಪಡಿತರ ಚೀಟಿ ಪಡೆಯಲು ಈ ಶ್ರಮ ಕಾರ್ಡ್ ಹೊಂದಿರಬೇಕು ಅಥವಾ ವೈದ್ಯಕೀಯ ಚಿಕಿತ್ಸೆಗಾಗಿ ಅಥವಾ ತುರ್ತು ಪರಿಸ್ಥಿತಿಗಳಿಗೆ ಸಂಬಂಧಿಸಿದಂತೆ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ರಾಜ್ಯ ಹಾಗೂ ಕೇಂದ್ರ ಸರಕಾರ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಹೊಸ ಪಡಿತರ ಚೀಟಿ ಪಡೆಯಲು ಹೊಂದಿರಬೇಕಾದ ಅರ್ಹತೆಗಳು (New Ration Card).?

  • ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಅಂತ ಕಡಿಮೆ ಇರಬೇಕು
  • ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರ ಕುಟುಂಬದ ಜಮೀನು 7.5 ಎಕರೆಗಿಂತ ಕಡಿಮೆ ಒಂದಿರಬೇಕು
  • ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ನಗರ ಅಥವಾ ಪಟ್ಟಣ ಪ್ರದೇಶದಲ್ಲಿ 100 ಮೀಟರ್ ಗಿಂತ ಕಡಿಮೆ ವಿಸ್ತೀರ್ಣದ ಪ್ಲಾಟ್ ಹೊಂದಿರಬೇಕು ಹಾಗೂ ಐಷಾರಾಮಿ ಬಂಗಲೆ/ಮನೆ ಹೊಂದಿರಬಾರದು
  • ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು
  • ಹೊಸ ಪಡಿತರ ಚೀಟಿ ಪಡೆಯಲು ಬಯಸುವ ಅರ್ಜಿದಾರರು ಆದಾಯ ತೆರಿಗೆ ಪಾವತಿ ಮಾಡಬಾರದು ಹಾಗೂ ಸ್ವಂತ ವೈಟ್ ಬೋರ್ಡ್ ಕಾರ್ ಅಥವಾ ಇತರೆ ಐಷಾರಾಮಿ ವಾಹನಗಳು ಹೊಂದಿರಬಾರದು

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತೆ ದಿನಾಂಕ ವಿಸ್ತರಣೆ..?

ಹೌದು ಗೆಳೆಯರೇ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಸದಸ್ಯರನ್ನು ತೆಗೆದುಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ಇರುವ ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಹೆಸರು ತಿದ್ದುಪಡಿ ಮತ್ತು ಆಧಾರ್ ಕಾರ್ಡ್ ಲಿಂಕ್ ಹಾಗೂ ಇತರೆ ಯಾವುದೇ ರೀತಿ ಬದಲಾವಣೆ ಮಾಡಲು ಇದೀಗ ಮತ್ತೆ ದಿನಾಂಕ ವಿಸ್ತರಣೆ ಮಾಡಲಾಗಿದೆ

ಹೌದು ಗೆಳೆಯರೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ 31 ಮಾರ್ಚ್ 2026 ರವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು

 

ಹೊಸ ರೇಷನ್ ಕಾರ್ಡ್ (New Ration Card) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಇ-ಶ್ರಮ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
  • ಇತರೆ ಅಗತ್ಯ ದಾಖಲಾತಿಗಳು
  • ಜನನ ಪ್ರಮಾಣ ಪತ್ರ (ಆರು ವರ್ಷದ ಒಳಗಿನ ಮಕ್ಕಳಿಗೆ)

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ಕೊನೆಯ ದಿನಾಂಕ ಯಾವಾಗ..?

ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ನೀವು ದಿನಾಂಕ 31 ಮಾರ್ಚ್ 2026 ಒಳಗಡೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಆದರೆ ಈ ಒಂದು ಅರ್ಜಿ ಸಲ್ಲಿಕೆ ಮಾಡಲು ಅರ್ಜಿದಾರರು ಕಡ್ಡಾಯವಾಗಿ ಇ-ಶ್ರಮ್ ಕಾರ್ಡ್ ಹೊಂದಿರಬೇಕು ಅಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು 2026 ಮಾರ್ಚ್ 31ರವರೆಗೆ ಅವಕಾಶ ಮಾಡಿಕೊಡಲಾಗಿದೆ

New Ration Card Application
New Ration Card Application

 

ಹಾಗಾಗಿ ಹೊಸ ಪಡಿತರ ಚೀಟಿ ಪಡೆಯಲು ಬಯಸುವ ಅರ್ಜಿದಾರರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ಒಳಗಡೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್

https://ahara.karnataka.gov.in/NRC/app_offline_current.aspx

 

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಆಸಕ್ತಿ ಇದೆ ಹಾಗಾದರೆ ತಕ್ಷಣ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

Gold Rate Fall – ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಚಿನ್ನ ಖರೀದಿಸುವ ಗ್ರಾಹಕರಿಗೆ ಶುಭ ಶುಕ್ರವಾರ

Leave a Comment

?>